ಚಿತ್ರ ಬರೆಸಿದ ಕವಿತೆ


ಓದುಗರಿಗೆಲ್ಲ ಆತ್ಮೀಯ ನಮಸ್ಕಾರ,

ಕೆಲ ವರ್ಷಗಳಿಂದ ಸೋಶಿಯಲ್ ಮೀಡಿಯಾಗಳಲ್ಲಿ ಫೋಟೋ ಹಾಕುವುದು ಬಹಳಷ್ಟು ಜನರ ಪ್ರಮುಖವಾದ ಹವ್ಯಾಸವಾಗಿ ಬದಲಾಗಿದೆ. ಫೋಟೋ ವಿಡಿಯೋ ಹಾಕುವ ಕಾಯಕವೇ ಹಣಗಳಿಸುವ ಉತ್ತಮ ವೇದಿಕೆಯಾಗಿಯೂ ಮಾರ್ಪಟ್ಟಿದೆ. ಒಂದಿಷ್ಟು ಜನ ತಮ್ಮ ವೈಯಕ್ತಿಕ ಜೀವನವನ್ನು ಚಿತ್ರಗಳ ಮೂಲಕ ಜಗತ್ತಿನ ಮುಂದೆ ಅನಾವರಣ ಗೊಳಿಸಿದರೆ, ಮತ್ತೊಂದಷ್ಟು ಜನ ಹೂವು, ಹಣ್ಣು, ನೀರು, ಆಕಾಶ, ಕೀಟ, ಹಕ್ಕಿ ಅಂತೆಲ್ಲ ನಮ್ಮ ಸುತ್ತಲಿನ ಸುಂದರ ಜಗತ್ತನ್ನು ಇನ್ನೂ ಸುಂದರವಾಗಿ ತಮ್ಮ ಚಿತ್ರಗಳ ಮೂಲಕ ಚಿತ್ರಿಸಿ ನಮ್ಮ ಮುಂದಿಟ್ಟು ರಂಜಿಸುತ್ತಾರೆ. ಈ ಚಿತ್ರಗಳು ಪರಿಚಯವೇ ಇಲ್ಲದ ಜಗತ್ತಿನ ಅದ್ಯಾವುದೋ ಮೂಲೆಯಲ್ಲಿದ್ದುಕೊಂಡು ಮತ್ತೊಬ್ಬ ಸಮಾನಸಕ್ತನ ಅದ್ಯಾವುದೋ ಭಾವಕೋಶದ ಪದರನ್ನು ಮೆತ್ತಗೆ ತಟ್ಟಿ, ಕವಿತೆ ಕವನ ಹುಟ್ಟಿಸುತ್ತವೆ.

ನಾನು ಆಗೀಗ, ನನ್ನ ಕ್ಯಾಮೆರಾ ಮತ್ತು ಫೋನ್ನಲ್ಲಿ ತೆಗೆದ ಚಿತ್ರಗಳನ್ನ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುತ್ತಾ ಇರುತ್ತೇನೆ. ಅಲ್ಲಿರುವ ಕೆಲ ಕವಿ ಹೃದಯಗಳಿಗೆ ನಾನು ಹಂಚಿಕೊಂಡ ಚಿತ್ರಗಳು ಇಷ್ಟವಾಗಿ ಅವರು ಮನಸಿಗೆ ಬಂದ ಭಾವವನ್ನು ಬರೆದು ಆ ಚಿತ್ರದ ಸಾರ್ಥಕತೆಯನ್ನು ಹೆಚ್ಚಿಸುತ್ತಾರೆ.
ಇತ್ತೀಚಿಗೆ ಫೋಟೋಗಳನ್ನು ಕ್ಲಿಕ್ ಮಾಡುವಾಗಲೇ, ಕೆಲವರು ನೆನಪಾಗಿ ಬಿಡುತ್ತಾರೆ. ಈ ಚಿತ್ರ ಇವರಿಗೆ ಇಷ್ಟ ಆಗಬಹುದು/ಆಗುತ್ತದೆ ಎಂದು ಮನಸ್ಸು ಹೇಳುತ್ತದೆ.
ನಾನು ಕ್ಲಿಕ್ಕಿಸಿದ ಭಾವಚಿತ್ರವನ್ನು ಮೆಚ್ಚುವ ಸ್ಫೂರ್ತಿಯಾಗಿ ಕವಿತೆಯನ್ನು ಬರೆದು ಕಳಿಸುವ ಇಬ್ಬರನ್ನು ನಿಮ್ಮೆಲ್ಲರಿಗೂ ಪರಿಚಯಿಸಿ, ಅವರ ಕವಿತೆಗಳನ್ನು
ಚಿತ್ರಗಳೊಂದಿಗೆ ಹಂಚಿಕೊಳ್ಳುತ್ತಿರುವೆ. ಎಂದಿನಂತೆ ನಿಮ್ಮ ಅನಿಸಿಕೆಯನ್ನು ತಪ್ಪದೇ ತಿಳಿಸಿ.
ವಂದನೆಗಳು
– ಅಮಿತಾ ರವಿಕಿರಣ್


ಮೇದಿನಿ ಕೆಸುವಿನ ವ್ಯ್ಮನೆ







Leave a Reply

Your email address will not be published. Required fields are marked *