ಈ ದೇಶದಲ್ಲಿ (ಯುನೈಟೆಡ್ ಕಿಂಗ್ಡಮ್) ನೀವು ಎಲ್ಲೇ ಇರಿ, ನಿಮಗೆ ಹತ್ತಿರದಲ್ಲೇ ಒಂದು ಐತಿಹಾಸಿಕ ಸ್ಥಳ ಇರುವ ಸಾಧ್ಯತೆ ಇರುತ್ತದೆ. ಅದು ನೂರಾರು ವರ್ಷಗಳ ಹಿಂದೆ ಕಟ್ಟಿದ ಮನೆ ಇರಬಹುದು, ಹೆಸರಾಂತ ಪುರುಷ ಅಥವಾ ಮಹಿಳೆ ಬದುಕಿದ್ದ ಊರು ಇರಬಹುದು ಅಥವಾ ಯುದ್ಧ ನಡೆದ ಸ್ಥಳ ಇರಬಹುದು. ಇವು ಯಾವುವೂ ಇಲ್ಲದಿದ್ದರೆ ನೂರಾರು ವರ್ಷಗಳ ಹಳೆಯ ಆದರೆ ಇನ್ನೂ ಬದುಕಿಕೊಂಡು ಬಂದಿರುವ ಒಂದು ಪಬ್ ಅಂತೂ ಇದ್ದೇ ಇರುತ್ತದೆ!
ಇಲ್ಲಿನ ಅನೇಕ ಸಂಸ್ಥೆಗಳು (ಉದಾ: English Heritage, National Trust) ಇಂಥ ಜಾಗಗಳ ಸಂರಕ್ಷಣೆಯ ಹೊರೆಯನ್ನು ತೆಗೆದುಕೊಂಡಿರುತ್ತಾರೆ. ಅದಲ್ಲದೇ, ನೂರಾರು ವರ್ಷಗಳ ಹಿಂದಿನ ಮೂಲದಾಖಲೆಗಳನ್ನು ಜೋಪಾನವಾಗಿ ಕಾಪಾಡಿಕೊಂಡು ಬಂದಿರುವ ಅನೇಕ ಸಂಸ್ಥೆಗಳಿವೆ (ಉದಾ: National Archives, Public Records Office, British Library). ಅಷ್ಟೇ ಅಲ್ಲದೇ ಬಹುಷಃ ಎಲ್ಲ ಚರ್ಚುಗಳೂ ಸಹ ಸ್ಥಳೀಯ ದಾಖಲೆಗಳನ್ನು ಕಾಪಾಡಿಕೊಂಡು ಬಂದಿರುತ್ತವೆ.
ನಾವಿರುವ ಹತ್ತಿರದ ಊರಿನಲ್ಲಿ, ಕೇವಲ ಎರಡು ಮೈಲಿ ದೂರದಲ್ಲಿ ೧೬ನೇ ಶತಮಾನದ ಬೇಸಿಂಗ್ ಮನೆ (Basing House) ಮತ್ತು ಹತ್ತು ಮೈಲಿ ದೂರದಲ್ಲಿ ಚಾವ್ಟನ್ ವಿಲೇಜ್ (Chawton village)ನಲ್ಲಿ ೧೯ನೇ ಶತಮಾನದಲ್ಲಿದ್ದ ಪ್ರಸಿದ್ಧ ಸಾಹಿತಿ ಜೇನ್ ಆಸ್ಟೆನ್ (Jane Austen) ವಾಸವಾಗಿದ್ದ ಮನೆ ಇದೆ. ಅಂದ ಹಾಗೆ ಸಮೀಪದಲ್ಲಿ ಡಮ್ಮರ್ ಅನ್ನುವ ಹಳ್ಳಿಯಲ್ಲಿ ೪೦೦ ವರ್ಷಗಳಷ್ಟು ಹಳೆಯ Queen Inn PUB ಇದೆ!

ಈ ಲೇಖನ `ಬೇಸಿಂಗ್ ಹೌಸ್` ಬಗ್ಗೆ. ಸ್ಥಳೀಯ ಚರಿತ್ರೆಯಲ್ಲಿ ಇಲ್ಲಿ ಕ್ರಿ.ಶ. ೧೧೦೦ ನಲ್ಲಿ `ಡಿ ಪೋರ್ಟ್` ಮನೆತನದವರು ೧೫ ಎಕರೆ ಜಾಗದಲ್ಲಿ ಒಂದು ವಿಶಾಲವಾದ ಕೋಟೆಯನ್ನು ಕಟ್ಟಿದ ವಿವರಗಳಿವೆ. ಇವರು ೧೦೬೬ರಲ್ಲಿ ಬಂದ ವಿಲಿಯಂ (William, the Conqueror)ನ ಕಡೆಯವರು. ಕೋಟೆಯ ಸುತ್ತಲೂ ರಕ್ಷಣೆಗಾಗಿ ಅನೇಕ ಗುಂಡಿ ಮತ್ತು ಕಾಲುವೆಗಳನ್ನು ಕಟ್ಟಿದರು. ನಂತರ ಬಂದವನು ವಿಲಿಯಂ ಪ್ಯಾಲೆಟ್. ಈತ ಹೆನ್ರಿ-೮ನ ಆಸ್ಥಾನದಲ್ಲಿ ಉನ್ನತ ಹುದ್ದೆಯಲ್ಲಿ ಇದ್ದವನು. ಕಾರ್ಡಿನಲ್ ವುಲ್ಸಿ (Cardinal Woolsey) ಜೊತೆಯಲ್ಲಿ ಕೆಲಸ ಮಾಡಿದ ನಂತರ ಹಣಕಾಸಿನ ಸಚಿವನಾದವನು (ಈಗಿನ Chancellor of the Exchequer ತರಹ). ಕ್ರಿ.ಶ. ೧೫೩೫ರಲ್ಲಿ ಹಳೆಯ ಕೋಟೆಯ ಪಕ್ಕದಲ್ಲಿ ೩೬೫ ಕೊಠಡಿಗಳ ಅರಮನೆಯನ್ನು ಕಟ್ಟಿಸಿದ. ಈ ಮನೆ ಆಗ ರಾಜ್ಯದಲ್ಲೇ ಅತ್ಯಂತ ದೊಡ್ಡ ಮನೆ ಆಗಿತ್ತು. ಅನೇಕ ರಾಜ್ಯವಂಶದ ಮನೆಯವರು ಇಲ್ಲಿಗೆ ಬರುತ್ತಿದ್ದರು. ಹೆನ್ರಿ-೮ ಸಹ ಭೇಟಿ ಕೊಟ್ಟಿದ್ದ. ರಾಣಿ ಎಲಿಝಬೆತ್-೧, ೧೫೬೦, ೧೫೬೯ ಮತ್ತು ೧೬೦೧ ನಲ್ಲಿ ಇಲ್ಲಿ ಬಂದು ಅನೇಕ ದಿನಗಳನ್ನು ಕಳೆದಿದ್ದಳು. ೧೫೫೧ರಲ್ಲಿ ಎಡ್ವರ್ಡ್-೬ ಈತನಿಗೆ Marquess of Winchester ಅನ್ನುವ ಬಿರುದನ್ನು ಕೊಟ್ಟು ಗೌರವಿಸಿದ.
ಈ ವಂಶದ ಜಾನ್ ಪೌಲೆಟ್, ಐದನೇಯ Marquess of Winchester, ಕಾಲದಲ್ಲಿ ಈ ಮನೆ ನಾಶವಾಯಿತು. ಇದರ ಕಾರಣ, English Civil War (೧೬೪೨-೧೬೫೧); ಇದರ ಬಗ್ಗೆ ಇಲ್ಲಿ ಸಂಕ್ಷಿಪ್ತ ವಿವರಣೆ ಸೂಕ್ತ.
ಕ್ಯಾಥೋಲಿಕ್ ಮತ್ತು ಪ್ರಾಟೆಸ್ಟೆಂಟ್ ಪಂಗಡದವರ ಮನಸ್ತಾಪ, ಚಾರ್ಲ್ಸ್-೧ನ ಅತೃಪ್ತಿಕರ ರಾಜ್ಯಭಾರ ಮತ್ತು ಆಡಳಿತ ತನ್ನ ಹಕ್ಕು ಮಾತ್ರ ಎಂಬ ಅಹಂಕಾರ, ಪಾರ್ಲಿಮೆಂಟಿಗೆ ರಾಜನ ಆಡಳಿತದ ಅಧಿಕಾರ ಕಡಿಮೆ ಮಾಡುವ ಪ್ರಯತ್ನ, ಪ್ರಜಾಪ್ರಭುತ್ವ ಪಂಗಡದ ಮುಖ್ಯಸ್ಥನಾದ ಆಲಿವರ್ ಕ್ರಾಂವೆಲ್-ಗೆ ಇಂಗ್ಲೆಂಡ್ ದೇಶದಲ್ಲಿ ಪ್ರಾಟೆಸ್ಟಂಟ್ ಜಾತಿ ಮಾತ್ರ ಉಳಿಯಬೇಕೆಂಬ ಉದ್ದೇಶ – ಇವು ಕೆಲವು ಮುಖ್ಯ ಕಾರಣಗಳು.
ಚಾರ್ಲ್ಸ್-೧ ಕ್ಯಾಥೋಲಿಕ್ ಪಂಗಡದವರ ಹಿತೈಷಿ ಮತ್ತು ಈ ಜಾತಿಗೆ ಸೇರಿದ್ದ ಹೆನ್ನಿರೀತ ಮರಿಯ ಮದುವೆ ಆಗಿದ್ದು ಅನೇಕರಿಗೆ ಅಸಮಾಧಾನ ಉಂಟಾಯಿತು. ಕ್ಯಾಥೋಲಿಕ್ ಪಂಗಡದವರ ಮಾದರಿಯ ಚರ್ಚುಗಳಿಗೆ ಹೆಚ್ಚು ಸ್ವಾತಂತ್ರ ಕೊಡುವ, ಪಾರ್ಲಿಮೆಂಟಿನ ಅನುಮತಿ ಇಲ್ಲದೇ ಹಣವನ್ನು ತನ್ನ ಯುದ್ಧಗಳಿಗೆ ಬಳಸುವ ಮತ್ತು ಅನೇಕ ಸಲ ಪಾರ್ಲಿಮೆಂಟನ್ನೇ ರದ್ದುಮಾಡಿ ಸರ್ವಾಧಿಕಾರಿಯಾಗಿ ರಾಜ್ಯವನ್ನು ಆಳುವ ಪ್ರಯತ್ನಗಳನ್ನು ಮಾಡಿದ.
ಪ್ರಾಟೆಸ್ಟಂಟ್ ಪಂಗಡದ ನಾಯಕ ಆಲಿವರ್ ಕ್ರಾಂವೆಲ್ ಪ್ರಜಾಪ್ರಭುತ್ವದ ಮುಂದಾಳಾಗಿ ಚಾರ್ಲ್ಸ್ ಮೇಲೆ ಹೋರಾಟ ಆರಂಭಿಸಿದ. ಆದರೆ ಕ್ಯಾಥೋಲಿಕ್ ಪಂಗಡವರು ರಾಜನ ನೆರವಿಗೆ ಮುಂದೆ ಬಂದರು. ಹೀಗಾಗಿ ೧೬೪೨ ರಿಂದ ೧೬೫೧ ಈ ದೇಶದಲ್ಲಿ ಅನೇಕ ಕಡೆ ಯುದ್ಧಗಳಾದವು. ಇದಲ್ಲದೆ ಹಲವಾರು ಪ್ರಬಲ ಕ್ಯಾಥೋಲಿಕ್ ಮನೆತನದವರ ಮೇಲೂ ಧಾಳಿ ನಡೆಯಿತು. ಅದರಲ್ಲಿಈ ಬೇಸಿಂಗ್ ಹೌಸ್ ಕೂಡ ಒಂದು. ಇದರ ಮಾಲಿಕ, ಜಾನ್ ಪೌಲೆಟ್, ಕ್ಯಾಥೋಲಿಕ್ ಪಂಗಡಕ್ಕೆ ಸೇರಿದವರು ಮತ್ತು ಚಾರ್ಲ್ಸ್-೧ನ ಹಿತೈಷಿ.
ಈ ಮನೆಯ ಮೇಲೆ ಮೊದಲ ಬಾರಿಗೆ ೧೬೪೨ರಲ್ಲಿ, ಕರ್ನಲ್ ನಾರ್ಟನ್-ನ ನೇತೃತ್ವದಲ್ಲಿ ಪ್ರಜಾಪ್ರಭುತ್ವದ ಸೇನೆ ಧಾಳಿ ನಡೆಸಿತು. ಆದರೆ ಚಾರ್ಲ್ಸ್ ತನ್ನ ಸೈನ್ಯದ ಒಂದು ತುಂಡನ್ನು ಜಾನ್ ಪೌಲೆಟ್ ಸಹಾಯಕ್ಕೆ ಕಳಿಸಿದ್ದರಿಂದ ಧಾಳಿ ಯಶಸ್ವಿ ಆಗಲಿಲ್ಲ.
೧೬೪೩ ರಲ್ಲಿ ಸರ್ ವಿಲಿಯಂ ವಾಲ್ಲರ್ ೫೦೦ ಸೈನಿಕರು ಮತ್ತು ೫೦೦ ಕುದುರೆಗಳ ಪಡೆಯನ್ನು ತಂದು ಮೂರು ದಿನ ಈ ಮನೆ ಮುತ್ತಿಗೆ ಹಾಕಿ, ಮನೆಯ ಪಕ್ಕದಲ್ಲಿದ್ದ ದೊಡ್ಡ ಕೊಟ್ಟಿಗೆಯನ್ನು ಆಕ್ರಮಿಸಿಕೊಂಡ. ಜಾನ್ ಪೌಲೆಟ್ ಶರಣಾಗತನಾದರೆ ರಕ್ತಪಾತ ತಪ್ಪಿಸಬಹುದು ಎಂದು ಸಂದೇಶವನ್ನು ಕಳಿಸಿದ. ಆದರೆ ಇದನ್ನು ನಿರಾಕರಿಸಿ ರಾಜ್ಯವಂಶದ ಬೆಂಬಲಿಗರಿಂದ ಹೋರಾಟ ಮುಂದುವರೆಸಿ ಮನೆಯ ಮೇಲಿನಿಂದ ಫಿರಂಗಿಗಳನ್ನು ನಿಲ್ಲಿಸಿ ಎದುರಾಳಿಗಳ ಮೇಲೆ ಹಲ್ಲೆ ಮಾಡಿದರು. ಈ ಕದನದಲ್ಲಿ ಪ್ರಜಾಪ್ರಭುತ್ವದ ಕ್ಯಾಪ್ಟನ್ದ ಕ್ಲಿನ್ಸನ್ ಮರಣ ಹೊಂದಿದ. ಇದನ್ನು ತಡೆಯಲಾರದೆ ಮರುಗುಂಪು ಮಾಡುವುದಕ್ಕೆ ಈ ಸೈನ್ಯ ಹತ್ತಿರದ ಬೇಸಿಂಗ್ ಸ್ಟೋಕ್-ನಲ್ಲಿ ಸೇರಿದರು. ಪದೇ ಪದೇ ಧಾಳಿ ನಡೆಸಿದರೂ ಬೇಸಿಂಗ್ ಮನೆಯನ್ನು ವಶಪಡೆಯುವುದಕ್ಕೆ ಸಾಧ್ಯವಾಗಲಿಲ್ಲ.
ಕೊನೆಗೆ, ಮೂರು ವರ್ಷದ ನಂತರ, ಆಲಿವರ್ ಕ್ರಾಂವೆಲ್ ಸ್ವತಃ ತನ್ನ ಸೈನ್ಯದೊಂದಿಗೆ ಬಂದು (೧೪/೧೦/೧೬೪೫ ) ಮನೆಯ ಮುಂದಿನ ಹೆಬ್ಬಾಲಿಗೆ ಫಿರಂಗಿನಿಂದ ಹೊಡೆದು ಓಳಗೆ ನುಗ್ಗಿ ಮನೆಯನ್ನು ಲೂಟಿ ಮಾಡಿದ ನಂತರ ಕರ್ನಲ್ ಡಾಲ್ಬಿರ್ ಈ ಮನೆಗೆ ಬೆಂಕಿ ಹಚ್ಚಿ ನಾಶ ಮಾಡಿದ. ಸ್ಥಳೀಯ ಜನರು ಬಂದು ಈ ಮನೆಯನ್ನು ಲೂಟಿ ಮಾಡಿದರೆ ಅಪರಾಧ ಇಲ್ಲ ಅನ್ನುವ ಸಂದೇಶವನ್ನು ಆಲಿವರ್ ಕ್ರಾಂವೆಲ್ ಕೊಟ್ಟ.
ಜಾನ್ ಪೌಲೆಟ್ ಶರಣಾಗತನಾದ ಮೇಲೆ ಲಂಡನ್ ಟವರಿನಲ್ಲಿ (London Tower) ಅನೇಕ ವರ್ಷ ಸೆರೆಯಲ್ಲಿದ್ದ. ೧೬೫೮ರಲ್ಲಿ ಆಲಿವರ್ ಕ್ರಾಂವೆಲ್ ಮರಣವಾದ ನಂತರ ಒಳಜಗಳಗಳು ಶುರುವಾಗಿ ರಾಜ್ಯವಂಶದವರನ್ನು ಬಿಟ್ಟು ಪ್ರಜಾಪ್ರಭುತ್ವ ಮಾತ್ರದಿಂದ ರಾಜ್ಯವನ್ನು ಆಳುವುದು ಸಾಧ್ಯವಾಗಲಿಲ್ಲ. ಈ ಕಾರಣದಿಂದ, ಚಾರ್ಲ್-೧ನ ಮಗ ಸ್ಕಾಟ್ಲೆಂಡಿನಲ್ಲಿ ರಾಜನಾಗಿದ್ದ. ಚಾರ್ಲ್ಸ್-೨ನನ್ನು ೧೬೬೦ರಲ್ಲಿ ಪಟ್ಟಕ್ಕೆ ತಂದರು. ರಾಜಪ್ರಭುತ್ವ ಪುನಃ ಮರಳಿ ಬಂತು ಮತ್ತು ಪ್ರಜಾಪ್ರಭುತ್ವದ ಪ್ರಭಾವವೂ ಹೆಚ್ಚಾಯಿತು.
ಈ ಯುದ್ದದ ನಂತರ, ಚಾರ್ಲ್ಸ್ ಮೇಲೆ ದೇಶದ್ರೋಹಿ ಎಂಬ ಅಪರಾಧಕ್ಕೆ ಮರಣ ದಂಡನೆ ಶಿಕ್ಷೆ ವಿಧಿಸಿ, ಜನವರಿ ೩೦, ೧೬೪೯ರಲ್ಲಿ ಬಹಿರಂಗವಾಗಿ ಈಗಿನ White Hall ನಲ್ಲಿ ಶಿರಚ್ಛೇದನ ಮಾಡಲಾಯಿತು.
ಚರ್ಲ್ಸ್-೨ನು ಜಾನ್ ಪೌಲೆಟ್ ಮೇಲಿನ ಅಪರಾಧಗಳನ್ನು ರದ್ದು ಮಾಡಿ ಸೆರೆಯಿಂದ ಬಿಡುಗಡೆ ಮಾಡಿದ. ಬೇಸಿಂಗ್ ಮನೆಯನ್ನು ವಶ ಮಾಡಿಕೊಂಡ, ಆದರೆ ಈ ನೆಲಸಮವಾದ ಮನೆಯನ್ನು ಪುನಃ ಕಟ್ಟುವ ಆರ್ಥಿಕ ಶಕ್ತಿ ಇರಲಿಲ್ಲ. ಇವನ ಮಗ ಚಾರ್ಲ್ಸ್ ಹತ್ತಿರದಲ್ಲಿ ಬೇರೆ ಮನೆ ಕಟ್ಟಿದ. ಈಗ ಉಳಿದಿರುವುದು ಅಡಿಪಾಯ ಮತ್ತು ಒಂದು ದೊಡ್ಡ ಕೊಟ್ಟಿಗೆ. ಈ ಮನೆಗೆ ಸಂಬಂಧಪಟ್ಟ ವಸ್ತುಸಂಗ್ರಾಲಯ. ಇದರ ಆಡಳಿತ Hampshire Cultural Trust ನೋಡಿಕೊಳ್ಳುತ್ತದೆ.
(ಚಿತ್ರಗಳು: ವಿವಿಧ ಮೂಲಗಳಿಂದ)
Many thanks for your valuable comments. It gives me a lot of encouragement to write. There are many hidden historical gems in this country carefully preserved over the centuries. If you watch BBC’s “Who Do You Think You Are” it is amazing to see how the records are kept. Their Security correspondent Frank Gardner could trace his family to year 1066!,
It is unfortunate that in India we have not given much importance for record keeping. It was Dr Rice who compiled and catalogued thousands of Shasanas unearthed in different parts of Karnataka.This was well over a century back
LikeLike
ರಾಮಮೂರ್ತಿಯವರು ಇತಹಾಸವನ್ನು ಕೆದಕಿ ಅದನ್ನು ಬರೆಯುವ ರೀತಿ ಅನನ್ಯ. ನಾನು ಐತಿಹಾಸಿಕ ಸ್ಥಳಗಳನ್ನು ಒಮ್ಮೆ ಸುತ್ತಿ ನಾಕಾರು ಫೋಟೊ ತೆಗೆದುಕೊಂಡು ಬಂದರೆ ಅಲ್ಲಿಗೆ ನನ್ನಕೆಲಸ ಮುಗಿಯಿತು. ಆದರೆ ರಾಮಮೂರ್ತಿಯವರು ಅದರ ಆಳ ಅಗಲದಲ್ಲಿ ಓಡಾಡಿಸಿ ಬಿಡುತ್ತಾರೆ. ಇಂಥ ಅನರ್ಘ್ಯ ಲೇಖನಗಳನ್ನು ಅನಿವಾಸಿಗೆ ರವಾನಿಸುತ್ತಾರೆ. ಇನ್ನೂ ಹೆಚ್ಚಿನ ಲೇಖನಗಳು ಬರಲಿ.
– ಕೇಶವ
LikeLike
Very interesting account of local history. The Lord protector Oliver Cromwell, his theocratic rule favouring protestants is well laid out by Ramamurthy. Oliver Cromwell no doubt has made significant contribution to the violent and bloody history of England. Those who live by blood will die by blood, but Cromwell died from an illness and not by the sword, but still his body was exhumed, hanged, and then the head was put on the spike. It is difficult to judge the history. In England we live amidst history, quiet oblivious of what surrounds us, articles like this kindle our interests.
LikeLike
The historophile Ramamurthy has done it again! (ಇತ್ತೀಚಿಗೆ ಪ್ರಸಾದ್ ಅವರು ಬರೆದಂತೆ) ರಾಮಮೂರ್ತಿಯವರಿಗೆ ಐತಿಹಾಸಿಕ ವಿಷಯಗಳಲ್ಲಿ ಅನನ್ಯ ಆಸ್ಥೆ! ಬೇಸಿಂಗ್ ಅಂತಹ ಊರುಗಳ ಸ್ಥಳಮಹಾತ್ಮೆಯನ್ನು ಇತಿಹಾಸದ ಜೊತೆಗೆ ಸುಂದರವಾಗಿ ವರ್ಣಿಸಿದ್ದಾರೆ. ಈ ನಾಡಿನಲ್ಲಿ ವಾಸಿಸುವ ಅನೇಕರಿಗೆ ಈಗಾಗಲೇ ಸುಪರಿಚಿತ ಮಹತ್ವದ ಐತಿಹಾಸಿಕ ಘಟನೆಗಳಾದ ಕ್ರಾಮವೆಲ್ ಪೀರಿಯಡ್ ಹಿನ್ನೆಲೆಯಲ್ಲಿ ಈ ಪಾಳೇಗಾರನ ಮನೆಯ ಇತಿಹಾಸ ರೋಚಕವಾಗಿದೆ. ಇಂಥ ಸ್ಥಾನಗಳನ್ನು ನೋಡಿದರೆ ಅದರ ಬಗ್ಗೆ ಕುತೂಹಲ ಹೆಚ್ಚಾಗುತ್ತದೆ. ಈ ದೇಶದಲ್ಲಿ ಇಂಥ ಸ್ಥಳಗಳನ್ನು ಪುನರುತ್ಥಾನ ಮಾಡಿ ಮಾಹಿತಿ ಕೊಟ್ಟು ಪ್ರದರ್ಶಿಸುವ ಅನೇಕ ಸಂಸ್ಥೆಗಳು ಮತ್ತು ಪ್ರೈವೇಟ್ ‘ನೋಬಲ್” ಕುಟುಂಬ ನಿರ್ವಸುವುದು ನೋಡುವದು ಚಂದ. ಲೂಟಿ ಮಾಡಲು ಜನಸಾಮಾನ್ಯರಿಗೆ ಅನುಮತಿ ಕೊಟ್ಟ ಕ್ರಾಮ್ವೆಲ್ ಅಂತಾವರ ಬಗ್ಗೆ ಇನ್ನೆಲ್ಲಿ ಓದುತ್ತೇವೆ? ಧನ್ಯವಾದಗಳು, ರಾಮಮೂರ್ತಿಯವರೇ, ಈ ಅಪರೂಪದ ಸ್ಥಳಪುರಾಣಕ್ಕೆ!
LikeLike