ವೈಕುಂಠದಲ್ಲಿ ಕೋಲಾ(ಕ್ಲೋನಾ)ಹಲ! – ಸುದರ್ಶನ್ ಗುರುರಾಜರಾವ್ ಹರಟೆಕಟ್ಟೆ

ಕ್ಷೀರ ಸಾಗರದ ಮಧ್ಯದಲ್ಲಿ ಶೇಷ ಶಾಯಿಯಾಗಿ ಶ್ರೀ ಲಕ್ಷ್ಮಿಯ ಸೇವೆ ಪಡೆಯುತ್ತಿದ್ದ ಶ್ರೀಮನ್ನಾರಾಯಣನಿಗೆ ಡಿಸ್ಟರ್ಬ್ ಮಾಡುವ ಇರಾದೆ ಜಯ ವಿಜಯರಿಗೆ ಖಂಡಿತಾ ಇರಲಿಲ್ಲ. ತ್ರೇತಾ ದ್ವಾಪರ ಯುಗಗಳಲ್ಲಿ ಧರ್ಮಸಂಸ್ಥಾಪನೆಯನ್ನು ಮಾಡಿದ ನಂತರ ದೀರ್ಘ ವಿಶ್ರಾಂತಿಯಲ್ಲಿದ್ದ ಅವನು ಯಾವ ಕಿರಿ ಕಿರಿಯನ್ನೂ ನಿರೀಕ್ಷಿಸುತ್ತಿರಲಿಲ್ಲ. ಜಾಗತಿಕ ತಾಪಮಾನ ಏರುತ್ತಿರುವ ತೆರದಲ್ಲೇ ಮಾನವರ ಅನಾಚಾರಗಳೂ ಹೆಚ್ಚುತ್ತಿರುವುದು ಅವನಿಗೆ ತಿಳಿಯದ ವಿಷಯವಾಗಿರದಿದ್ದರೂ ಪ್ರಪಂಚವನ್ನು ಹಾಲು ಕಾಯಿಸಿದಂತೆ ತನ್ನಷ್ಟಕ್ಕೆ ತಾನು ಕಾಯ್ದು ಕೊಳ್ಳಲಿ, ಉಕ್ಕಿದಾಗ ನೋಡೋಣ ಎಂಬ ಎಣಿಕೆ ಅವನದು.ಅದೂ ಅಲ್ಲದೆ ದೇವಸ್ಥಾನಗಳ ಹುಂಡಿಯಲ್ಲಿ ಹಣದ ಮಹಾಪೂರವೇ ಹರಿಯುತ್ತಿರಲಾಗಿ ಧರ್ಮಕ್ಕೆ ಚ್ಯುತಿ ಬಂದಿರಲಾರದೆಂದು ಅವನ ಊಹೆ. ಇಷ್ಟಕ್ಕೂ ತಿರುಪತಿಯ ಹುಂಡಿಯಿಂದ ಕುಬೇರನ ಸಾಲಕ್ಕೆ ಹಣ ಚುಕ್ತಾ ಆಗುತ್ತಿರಲು ಒಂದು ರೀತಿಯ ನಿರಾಳವೇ ಅವನಲ್ಲಿತ್ತು.
Read More »

ಸುದರ್ಶನ್ ಹರಟೆ ಕಟ್ಟೆ: ಮಂಗ(ಗ)ಳ ಯಾನ

ವಿಶ್ವದಲ್ಲೇ ಪ್ರಥಮಬಾರಿಗೆ ಪ್ರಥಮ ಪ್ರಯತ್ನದಲ್ಲೇ ಪ್ರತಿಷ್ಠಿತ ಇಸ್ರೋ ಸಂಸ್ಥೆಯ ವಿಜ್ಞಾನಿಗಳು ಮಂಗಳನ ಅಂಗಳಕ್ಕೆ ಉಪಗ್ರಹವೋಂದನ್ನು ಇಳಿಸಿದ್ದು ವಿಜಯಾ ಮತ್ತೆ  ಅವನ ದಂಡಿಗೆ  ಭಾರೀ ಉನ್ಮಾದನಾನ್ನೂ, ದೇಶಪ್ರೇಮವನ್ನೂ,ಹುರುಪನ್ನು ಮೂಡಿಸಿಬಿಟ್ಟಿತು. ದೇಶದ ಸಮಸ್ತ ಜನಸ್ತೋಮದ ಜೊತೆಜೊತೆಗೆ ತಾವೂ ಈ ಸಾಧನೆಯನ್ನು ಸಂಭ್ರಮಿಸಿ ಪರಸ್ಪರ ಭಾರತೀಯರಾಗಿ ಅಭಿನಂದಿಸಿಕೊಂಡರು. ಅದೇ ಖುಷಿಯಲ್ಲಿ ತಾವು ಭಾರತೀಯರಾಗಿ ಈ ಭೂಮಿಯಲ್ಲಿ ಜನ್ಮ ತಾಳಿದ್ದಕ್ಕೆ ಸಾರ್ಥಕಭಾವವನ್ನು ಅನುಭವಿಸಿದರು. ತಮಗೆ ಕೆಲಸ ಸಿಗುವ ಮುನ್ನ, ಪೋಲಿಗಳಾಗಿ ಅಲೆಯುತ್ತಿದ್ದಾಗ ದಿನವೂ ಪೈಸೆ ಪೈಸೆಗೆ ಲೆಕ್ಖ ಕೇಳುತ್ತಿದ್ದ ತಂದೆತಾಯಿಯರನ್ನು ದಿನವೂ ಶಪಿಸುತ್ತಿದ್ದ, ತಮ್ಮನ್ನು ಈ ಭೂಮಿಗೆ ತಂದ ತಪ್ಪಿಗೆ ಅವರನ್ನೇ ನಿಂದಿಸುತ್ತಿದ್ದ ಅವರುಗಳಿಗೆಲ್ಲ ತಮ್ಮ ಮಾತಾ ಪಿತೃಗಳು ದೈವೀ ಸಮಾನರಾಗಿ ಗೋಚರಿಸಿದರು. ಅವರಿಗೆ ವಂದಿಸಿ ಹೆಚ್ಚು ಹುರುಪಿನಿಂದ ತಮ್ಮ ಕೆಲಸಕ್ಕೆ ನಡೆದರು.

ಅದಾದ ಒಂದು ತಿಂಗಳು ವಿಜಯನ ಸುದ್ದಿಯೇ ಇರಲಿಲ್ಲ,. ಯಾವ ಫೋನಿಗೂ ಈ-ಮೇಲಿಗೂ ಸಿಗಲಿಲ್ಲ. ಎಲ್ಲಿ ಹೋದ ಇವನು ಎಂದು ಎಲ್ಲರೂ ತಲೆ ಕೆರೆದು ಕೊಳ್ಳುತ್ತಿರುವಾಗಲೇ ಅವನು ಪ್ರತ್ಯಕ್ಷನಾದ ಎಲ್ಲಿ ಹಾಳಾಗಿ ಹೋಗಿದ್ಯೋ ದರ್ಬೇಶಿ  ಈ -ಮೇಲು ಕಳಿಸಿದರು ಉತ್ತರ ಇಲ್ಲ ಎಂದು ಅವರು ಕೇಳಲಾಗಿ,  ನಾನು ಹಾರುತ ದೂರಾ ದೂರಾ, ಫೀ ಮೇಲು ಜೊತೆ ಹೋಗಿರುವಾಗ ನಿಮ್ಮ ಮೇಲು ಗಳಿಗೆ ನನ್ನ ಜೀವನದಲ್ಲಿ ಪಾಲಿಲ್ಲ ಎಂದು ಅಸಂಬದ್ಧವಾಗಿ ನುಡಿದ. ಅದೇನು ಸರಿಯಾಗಿ ಹೇಳೋ ಅಂದಿದ್ದಕ್ಕೆ, ನಾನು ಮಾರ್ಸು,ಆರ್ಬಿಟ್ ಎಲ್ಲ ಸೊನಾಲಿ ಜೊತೆ ಸುತ್ತುಹಾಕಿಕೊಂಡು ಬಂದೆನಮ್ಮ. ಬೇಕಾದ್ರೆ ನೀವೂ ಮಾರ್ಸ್ ನೋಡ್ಬೋದು. ಅಷ್ಟ್ಯಾಕೆ, ಗ್ಯಾಲಾಕ್ಸೀನೆ ಭೇದಿಸಬಹುದು. ಡೀಟೈಲಾಗಿ ಕೇಳ್ಬೇಕಾದ್ರೆ ಸಾಯಂಕಾಲ ನಮ್ಮ ಮಾಮೂಲು ಜಾಗಕ್ಕೆ ಬನ್ನಿ. ಕಾಫೀ ತಿಂಡಿ ಜೊತೆ ಹೇಳ್ತೀನಿ ಈಗ ಟೈಮಿಲ್ಲಮ್ಮ ಅಂತ ತನ್ನ “ಆಪಲ್ ವಾಚು” ನೋಡಿಕೊಂಡು ಹೊರಟು ಹೋದ. Read More »