“ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷೀನೋ , ಇಲ್ಲಾ… ಓತಿಕ್ಯಾಥಕ್ಕೆ ಬೇಲಿ ಸಾಕ್ಷೀನೋ ? ಇವೆರೆಡರಲ್ಲಿ ಅನಂತಮೂರ್ತಿ ಮತ್ತು ಎಂ.ಎಂ. ಕಲುಬುರ್ಗಿ ಇಬ್ಬರ ಕಾಂಬಿನೇಷನ್ಗೆ ಚೆನ್ನಾಗಿ ಹೊಂದಿಕೆಯಾಗುವ ಗಾದೆ ಯಾವುದು?” ಎಂದು ವಿಜಯ ಕೇಳ್ದ. ಕಾಫಿ ಕುಡಿಯೋಣ ಬನ್ರೋ ಅಂತ ಕರೆದು, ಈಗ ನೋಡಿದ್ರೆ ತಲೆ ಕೆರಕೊಳ್ಳೋ ಪ್ರಶ್ನೆ ಕೇಳ್ತಾನಲ್ಲಾ ಅಂತ ಸೀನ, ಕಿಟ್ಟ, ಜಗ್ಗು, ಪುಟ್ಟ ಮತ್ತು ಸಂಜಯರಿಗೆ ಅನ್ನಿಸದೇ ಇರಲಿಲ್ಲ. ಇದೇನೋ ಮಸಲತ್ತು ಮಾಡ್ತಾ, ಯಾವ್ದೋ ಪ್ರಶ್ನೆ ಕೇಳಿ ಕಾಫಿ ದುಡ್ಡನ್ನು ಯಾರ್ದಾದ್ರೂ ತಲೆಗೆ ಕಟ್ಟೋ ಹುನ್ನಾರ ಮಾಡುತ್ತಿದ್ದಾನೆಂದು ಅವರಿಗೆ ಸಂಶಯವಾಯ್ತು. ಕೇಳೇ ಬಿಟ್ರು, “ಅದೆಲ್ಲಾ ಏನಿಲ್ಲ. ಇವತ್ತು ಕಾಫೀ ಖರ್ಚು ನನ್ನದೇ” ಅಂದ ವಿಜಯ.

ಉದ್ಧಾಮ ಸಾಹಿತಿ ಅನ್ನಿಸಿಕೊಂಡ ಯು.ಆರ್. ಅನಂತಮೂರ್ತಿ ಬಾಲ್ಯದಲ್ಲೋ, ತಾರುಣ್ಯದಲ್ಲೋ ದೇವರ ಇರುವನ್ನು ಅಲ್ಲಗಳೆಯಲು, ತನಗೆ ತಾನೇ ಸತ್ಯದ ಸಾಕ್ಷಾತ್ಕಾರಕ್ಕೆ ದೇವರ ಮೂರ್ತಿಯ ಮೇಲೆ ಉಚ್ಚೆ ಮಾಡಿದ್ದು ಹಾಗೂ ಸಂಶೋಧಕ, ಪ್ರಾಧ್ಯಾಪಕ ಅನ್ನಿಸಿಕೊಂಡ ಕಲುಬುರ್ಗಿ ಅದನ್ನು ಜಗಜ್ಜಾಹೀರು ಮಾಡಿದ್ದು, ಇದರಿಂದ ಹಿಂದೂ ಅಸ್ತಿಕವರ್ಗ ಕ್ರೋಧಗೊಂಡಿದ್ದು, ನಾಸ್ತಿಕ ವರ್ಗ ಪುಳಕಿತಗೊಂದಿದ್ದು, ಸಮಾಜದಲ್ಲಿ ಕೋಲಾಹಲ ಮೂಡಿದ್ದು, ಪತ್ರಿಕೆಗಳಲ್ಲಿ ಚರ್ಚೆಗೆ ಗ್ರಾಸವಾಗಿ ಪರಸ್ಪರರ ಮೇಲೆ ಕೆಸರೆರೆಚಾಟ ನಡೆದಿದ್ದು ಅವರಿಗೆ ಗೊತ್ತಿಲ್ಲದ್ದೇನಾಗಿರಲಿಲ್ಲ. ಇದನ್ನು ಚರ್ಚೆಗೆ ಎಳೆಯಲು ವಿಜಯ ಸಂಚು ನಡೆಸಿದ್ದ.
ಚರ್ಚೆಗೆ ವೇದಿಕೆ ಸಿದ್ಧಮಾಡಲು ವಿಜಯ ವಿಷಯದ ಪರಿಚಯ ಮಾಡಿದ: ಈಗ ಏನಪ್ಪಾ ಅಂದ್ರೆ,,,,