ಅಂಬೇಡ್ಕರ ಪುತ್ಥಳಿ – ಡಾ. ರಾಮಶರಣ ಬರೆದ ಕವಿತೆ

ಇವತ್ತು ಅಂಬೇಡ್ಕರ್ ಜನ್ಮದಿನ. ಅವರ ನೆನಪಿನಲ್ಲಿ ಒಂದು ಕವನ ನಮನ.

ಅಂಬೇಡ್ಕರ ಪುತ್ಥಳಿ

ಅಂಬೇಡ್ಕರ! ಅಂಬೇಡ್ಕರ!! ಅಂಬೇಡ್ಕರ!!!

CC – Wiki

ಜನ್ಮ ದಿನ ನೆನಪಾಗಿ
ನಡೆಸುವರು ಸಮಾರಂಭ ಆತುರದಿ
ದೀನ ದಲಿತೋದ್ಧಾರ, ಮತ್ತೆ ಕೊಂಚ ಮಮಕಾರ
ಉದಾತ್ತ ಧ್ಯೆಯೋದ್ದೇಶಗಳೆಲ್ಲಿ?
ಮುಂದುವರಿದವು ದಲಿತರ ದಮನ ನಿನ್ನ ಪ್ರತಿಮೆಯ ನೆರಳಿನಲಿ
Read More »

ಮತ್ತೇಕೆ ಯುಗಾದಿ ಬರುತಿದೆ? – ಕೇಶವ ಕುಲಕರ್ಣಿ ಬರೆದ ಕವನ

ಯುಗ ಯುಗಾದಿ ಕಳೆದರೂ
ಮತ್ತೇಕೆ ಯುಗಾದಿ ಬರುತಿದೆ?

Photo by the author

ಹೊಸ ವರುಷ ನಮಗೆ ಜನೆವರಿ ಒಂದಾಗಿ
ಆಗಲೇ ಇದು ಎರಡನೇ ತಲೆಮಾರು.
ವಸಂತ ಮಾಸ ಯಾಕೆ ಯಾವಾಗಲೂ
ಮಾರ್ಚ್ ಯಾ ಎಪ್ರಿಲ್ ಒಂದನೇ ತಾರೀಖು
ಶುರುವಾಗಬಾರದು? ಎನ್ನುವ ಜನಾಂಗ ನಾವು.
ನಿಮ್ಮ ಈ ‘ಸಂವತ್ಸರ’
ಪ್ರನೌನ್ಸ್ ಮಾಡೋದೂ ಕಷ್ಟ ನೋಡಿ.

ಹೊಂಗೆ ಹೇಗಿರುತ್ತೇಂತ ನೋಡಿಲ್ಲ
ಭೃಂಗದಿಂದ ಕಚ್ಚಿಸಿಕೊಂಡಿದ್ದು ಮಾತ್ರ ಗೊತ್ತು.
ಬೇವಿನ ಮರ ಬಿಡಿ, ಜಾಲಿ ಮರಕ್ಕೂ
ಈ ನಗರಗಳಲ್ಲಿ ಜಾಗವಿಲ್ಲ.
ಅಷ್ಟಕ್ಕೂ ಬೇವಿನ ಮರ ಹೂ ಬಿಟ್ಟಿದೆ ಅಂದುಟ್ಟುಕೊಳ್ಳಿ!
ಅದಕ್ಕೇನು ವೆನಿಲಾದ ತರ ಬೇರೆ ದೇಶದಲ್ಲಿ ಬೆಲೆ ಇದೆಯೇ?

ಮಾವಿನ ಹಣ್ಣಿಗೆ ಈಗ ವಸಂತ ಬರಲು
ಕಾಯಬೇಕಾಗಿಲ್ಲ
ವರ್ಷದ ಹನ್ನೆರಡೂ ತಿಂಗಳೂ
ಫ್ರೂಟಿ ಲಭ್ಯ

ಹಾಗೆಂದು ನಮಗೆ ವಸಂತ, ಚೈತ್ರ
ಅಂದು ಕನ್ಫೂಸ್ ಮಾಡಬೇಡಿ
ಅವು ಹುಡುಗಿ ಹೆಸರು ಅಂದುಕೋತೀವಿ
ನಿಯತ್ತಾಗಿ ’ಸ್ಪ್ರಿಂಗ್’ ಎನ್ನಲು ಆಗೋದಿಲ್ಲವೇ ನಿಮಗೆ?

ಈ ಜನ್ಮದಲ್ಲಿ ಒಂದೇ ಬಾಲ್ಯ ಒಂದೇ ಹರೆಯ
ಅದೆಲ್ಲ ಬೇಂದ್ರೆಯಲ್ಲೇ ಕಾಲವಾಯಿತು
ಈಗ ನಮಗೋ
ಯಾವಾಗ ಬೇಕೋ ಆವಾಗ ಹೊಸ ಜನ್ಮ
ಹೊಸ ಮುಖ ಹೊಸ ತಿಕ

ಅರವತ್ತರ ಮಡೋನಾ ಕೂಡ
ಕಾಸ್ಮೆಟಿಕ್ ಸರ್ಜರಿಯಲ್ಲಿ
ಮೂವತ್ತರ ಬೆಡಗಿ
ಮುದಿ ಯಯಾತಿಯ ಜೇಬಿನಲ್ಲಿ ವಯಾಗ್ರ
ಸಾವಿನ ಕಟೆಕಟೆಯಲ್ಲಿ ಕೂಡ
ನಮಗೆ ಸನತ್ಕುಮಾರ
ನೆನಪಾಗುವುದಿಲ್ಲ ಬಿಡಿ

ಇಷ್ಟೆಲ್ಲ ಆದ್ರೂ
ಮತ್ತೇಕೆ ಯುಗಾದಿ ಬರುತಿದೆ?